
ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಜೈಲುಪಾಲಾಗಿದ್ದಾರೆ.
ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಡಿಆರ್ ಐ ಅಧಿಕಾರಿಗಳು ಮತ್ತೆ ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ. ಆದರೆ ಕೋರ್ಟ್ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ.
15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ