
ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸ್ಲುಕಿಕೊಂಡಿರುವ ನಟಿ ರನ್ಯಾ ರಾವ್ ಗೆಸಾಲು ಸಾಲು ಸಂಕಷ್ಟ ಎದುರಾಗಿದೆ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಇಡಿ ಎಂಟ್ರಿಯಾಗಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ನಟಿ ರನ್ಯಾ ರಾವ್ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಬೆಂಗಳೂರಿನ ನಂದವಾಣಿ ಮ್ಯಾನ್ಶನ್ ನಲ್ಲಿರುವ ರನ್ಯಾರಾವ್ ನಿವಾಸ ಸೆರಿದಂತೆ 8 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.