
ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಕ್ಲರ್ಕ್ ಅತ್ಯಾಚಾರವೆಸಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರಕರಣದ ಬೆನ್ನಲ್ಲೇ ಕ್ಲರ್ಕ್ ನನ್ನು ಸಸ್ಪೆಂಡ್ ಮಾಡಲಾಗಿದೆ.
ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ಲರ್ಕ್ ಬಿ.ಭೀಮರಾಜ್ ವಿರುದ್ಧ ಆರೋಪ ಕೇಳಿಬಂಧಿದ್ದು, ಸದ್ಯ ಬಂಧನಕ್ಕೀಡಾಗಿರುವ ಭೀಮರಾಜ್ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕ್ಲರ್ಕ್ ಭೀಮರಾಜ್ ನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.