CrimeLatestNational

*ಅಕ್ಕನ ಮಗಳ ರೇಪ್ ಆ್ಯಂಡ್ ಮರ್ಡರ್: ಆರೋಪಿಯ ಎನ್‌ಕೌಂಟರ್*

ಪ್ರಗತಿವಾಹಿನಿ ಸುದ್ದಿ: ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 

ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿ. ಮೃತ ಬಾಲಕಿಗೆ ಕೇವಲ ನಾಲ್ಕು ವರ್ಷ ವಯಸ್ಸು. ಏಪ್ರಿಲ್ 11 ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ದಿನಗೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ, ಆರೋಪಿ, ಸಂತ್ರಸ್ತೆಯ ಮಾವ, ಏನೋ ತಿಂಡಿ ಕೊಡುತ್ತೇನೆ ಬಾ ಎಂದು ಕರೆದೊಯ್ದಿದ್ದ.

ನಂತರ ತನ್ನ ಬಾಡಿಗೆ ಕೋಣೆಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಬಾಲಕಿಯ ಶವ ಪತ್ತೆಯಾಗಿದೆ. 

ದೂರೂ ದಾಖಲಿಸಿಕೊಂಡು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಬಾಲಕಿ ಮಾವ ಈ ಕೃತ್ಯ ಮಾಡಿರುವುದು ಪೊಲೀಸರಿಗೆ ಗೊತ್ತಾಗಿದೆ.‌ ಜಸೀಮ್ ಬಗ್ಗೆ ಮಾಹಿತಿ ನೀಡಿದವರಿಗೆ ಪೊಲೀಸರು 50,000 ರೂ. ನಗದು ಬಹುಮಾನವನ್ನೂ ಘೋಷಿಸಿದ್ದರು. 

ಭಾನುವಾರ ರಾತ್ರಿ ಬಂತ್ಲಾ ಕಾಲುವೆ ಬಳಿ ಜಸೀಮ್ ಕಾಣಿಸಿಕೊಂಡಿದ್ದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಒಂದು ತಂಡ ತಡೆಯಲು ಪ್ರಯತ್ನಿಸಿದಾಗ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಗುಂಡಿನ ದಾಳಿಯಲ್ಲಿ, ಜಸೀಮ್‌ಗೆ ಗುಂಡು ತಗುಲಿದ್ದು, ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಗುಂಡಿ‌ನ ದಾಳಿಯಲ್ಲಿ ಅವನ ಇಬ್ಬರು ಸಹಚರರು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಸಹ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಪ್ರಥಮ ಚಿಕಿತ್ಸೆಗೆ ಕಳುಹಿಸಲಾಗಿದೆ. ಆತನಿಂದ ಕೆಲವು ಅಕ್ರಮ ಪಿಸ್ತೂಲ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button