
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸರು ಮೂವರು ಕಾಮುಕರನ್ನು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ವೇಮಗಲ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರು ಜನ ಆರೋಪಿಗಳು ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದರು.
ಪ್ರಕರಣದಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಮೂವರು ಆರೋಪಿಗಳಾದ ಚೇತನ್, ಕಿರಣ್, ಮಹೇಂದ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.