National

*ಅತ್ಯಾಚಾರ ಪ್ರಕರಣ: ಸುದ್ದಿಗೋಷ್ಠಿ ವೇಳೆಯೇ ಅರೆಸ್ಟ್ ಆದ ಸಂಸದ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ನನ್ನು ಪೊಲೀರು ಬಂಧಿಸಿದ್ದಾರೆ.

ಸಂಸದರು ತಮ್ಮ ಲೋಹರ್ ಬಾಗ್ ನಲ್ಲಿರುವ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಕೊತ್ವಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ಸಂಸದರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ವೇಳೆ ಕೋರ್ಟ್ ಆವರಣದಲ್ಲಿ ಗದ್ದಲ-ಗಲಾಟೆ ನಡೆದಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಸಂಸದರನ್ನು ಜೈಲಿಗೆ ಕಳುಹಿಸಿದೆ.

ಜ.17ರಂದು ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಂಸದ ರಾಕೇಶ್ ರಾಥೋಡ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗಾಗಿ ಸಂಸದರು ಜಿಲ್ಲಾ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಈ ಹಿನ್ನೆಲೆಯಲ್ಲಿ ಲಕ್ನೋ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸಂಸದ ರಾಕೇಶ್ ರಾಥೋಡ್ ಬಂಧನಕ್ಕೀಡಾಗಿ ಜೈಲು ಪಾಲಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button