Kannada NewsKarnataka NewsLatest

*BREAKING: ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಇನ್ಸ್ ಪೆಕ್ಟರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನ ಡಿ.ಜೆ.ಹಳ್ಳಿ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಅಮಾನತುಗೊಂಡವರು. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಎ ಎಸ್ ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Home add -Advt

Related Articles

Back to top button