Latest

*ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಶಿಷ್ಯೆಯ ಮೇಲೆಯೇ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸ್ಸಾರಾಮ್ ಬಾಪುಗೆ ಗುಜರಾತ್ ನ ಗಾಂಧಿನಗರ ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2013ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತನ್ನ ಶಿಷ್ಯೆಯಾಗಿದ್ದ ಮಹಿಳೆಯ ಮೇಲೆ 5 ವರ್ಷಗಳ ಕಾಲ ನಿರಂತರ ಅತ್ಯಾಚಾರ ವೆಸಗಿದ್ದಾಗಿ ಸಂತ್ರಸ್ತ ಮಹಿಳೆ 2013ರಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಅದೇ ವರ್ಷದ ಸೆ.1ರಂದು ಅಸಾರಾಮ್ ಬಾಪು ಸೇರಿ ಮೂವರನ್ನು ಬಂಧಿಸಲಾಗಿತ್ತು.

Home add -Advt

ಪ್ರಕರಣದ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಅಸಾರಾಮ್ ಬಾಪು ದೋಷಿ ಎಂದು ಸೋಮವಾರ ತೀರ್ಪು ನೀಡಿತ್ತು. ಆದರೆ ಶಿಕ್ಷೆ ಪ್ರಮಾಣ ಇಂದಿಗೆ ಕಾಯ್ದಿರಿಸಿತ್ತು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಡಿ.ಕೆ.ಸೋನಿ, ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

*ಹೈಸ್ಕೂಲು ವಿದ್ಯಾರ್ಥಿ ಆತ್ಮಹತ್ಯೆ; ಬಾಲಕನ ದುಡುಕಿನ ನಿರ್ಧಾರಕ್ಕೆ ಕಾರಣವೇನು?*

https://pragati.taskdun.com/14years-boy9th-studentssuicidemangalore/

Related Articles

Back to top button