*ದೆವ್ವ ಬಿಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ*: *ಸತೀಶ್ ಪಾತ್ರಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳ ಮೂಢನಂಬಿಕೆಯನ್ನೇ ಬಳಸಿಕೊಂಡ ಮಾಂತ್ರಿಕನೊಬ್ಬ ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯನ್ನು ನಂಬಿಸಿ ಆಕೆ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರ ನಡೆದಿದೆ, ಭೂತ ಬಿಡಿಸುತ್ತೇನೆ ಎಂದು ಮಹಿಳೆಯನ್ನು ನಂಬಿಸಿ ಆಕೆಯ ಮೇಲೆ ನಿರಂಯರ ಅತ್ಯಾಚಾರವೆಸಗಿದ್ದ ಆರೋಪಿ, ಪ್ರಕರಣ ದಾಖಲಾಗುತ್ತಿದ್ದಂತೆ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದ. ಹಾಸನ ಮೂಲದ ಮಹಿಳೆ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ … Continue reading *ದೆವ್ವ ಬಿಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ*: *ಸತೀಶ್ ಪಾತ್ರಿ ಅರೆಸ್ಟ್*