
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಿಂದ ಜೈಲು ಸೇರಿ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಬಂಧಿಸಿದ್ದರು. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಶಸಕ ಮುನಿರತ್ನನಾಯ್ಡು ಮತ್ತೆ ಜೈಲುಪಾಲಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ