Kannada NewsKarnataka NewsLatestNational

*ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿ, ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ, ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು, ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Home add -Advt

ಆದರೆ ಶಿವಕುಮಾರ್ ರೆಡ್ಡಿ ವಿಚರಣೆಗೆ ಹಾಜರಾಗಲು ಒಂದು ವಾರ ಕಾಲ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಕುಂಬಂ ಶಿವಕುಮಾರ್ ರೆಡ್ಡಿ, ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿಯೊಬ್ಬಳಿಗೆ ಜ್ಯೂಸ್ ನಲ್ಲಿ ಪ್ರಜ್ಞೆತಪ್ಪಿಸುವ ಔಷಧಿ ಬೆರಸಿ ಕೊಟ್ಟು, ಬಳಿಕ ಅತ್ಯಾಚಾರವೆಸಗಿದ್ದರು. ಅಲ್ಲದೇ ಕೃತ್ಯದ ಬಳಿಕ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಸಂತ್ರಸ್ತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ನೀಡಿದ್ದಾರೆ.

Related Articles

Back to top button