Latest

20 ತಿಂಗಳ ಮಗುವಿನ ಮೇಲೆ ಅತ್ಯಾಚಾರ; ಅರೋಪಿ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ, ಮುಂಬೈ: ವರ್ಲಿಯಲ್ಲಿ 20 ತಿಂಗಳ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಒಂದೆರಡು ದಿನಗಳ ಹಿಂದೆ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ಅಂಬೆಗಾಲಿಡುವ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಮಗು ನೋವಿನಿಂದ ಅಳುತ್ತಿದ್ದಾಗ ಏನೋ ತಪ್ಪಾಗಿದೆ ಎಂಬುದನ್ನು ಅರಿತ ಪೋಷಕರು, ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದಾಗ ಮಗುವಿನ ಮೇಲೆ ಅತ್ಯಾಚಾರವಾಗಿರುವುದನ್ನು ಅರಿತು ತಮ್ಮ ನೆರೆಯಲ್ಲೇ ವಾಸಿಸುವ ವ್ಯಕ್ತಿ ವಿರುದ್ಧ ಭಾನುವಾರ ದೂರು ದಾಖಲಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

11 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

Home add -Advt

https://pragati.taskdun.com/prime-ministers-national-bal-puraskar-for-11-children/

ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಪ್ರಶಸ್ತಿ

https://pragati.taskdun.com/state-level-award-for-deputy-commissioner/

ಪದವಿ ಪ್ರದಾನದ ವೇಳೆ ಅರಳಿತು ಕನ್ನಡ ಧ್ವಜ

https://pragati.taskdun.com/the-kannada-flag-was-unfurled-during-the-graduation-ceremony/

Related Articles

Back to top button