Kannada NewsLatestNationalPolitics

ಸ್ವಪಕ್ಷದ ನಾಯಕಿ ಮೇಲೆ ರೇಪ್‌: ಶಾಸಕ ಅಮಾನತು

ಪ್ರಗತಿವಾಹಿನಿ ಸುದ್ದಿ : ತಮ್ಮದೇ ಪಕ್ಷದ ನಾಯಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಶಾಸಕ ಕೊನೇಟಿ ಆದಿಮೂಲಂ ಅವರನ್ನು ಅಮಾನತುಗೊಳಿಸಲಾಗಿದೆ.

ಮಹಿಳಾ ಸಹೋದ್ಯೋಗಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ಅವರ ಮೇಲೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಂಡಿದೆ.

ಕಳೆದ ಜುಲೈನಲ್ಲಿ ತಿರುಪತಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಮೂರು ವಿಭಿನ್ನ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೃತ್ಯ ಬಹಿರಂಗಪಡಿಸಿದರೆ ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಕೊಲ್ಲುತ್ತೇನೆ ಎಂದು ಆದಿಮೂಲಂ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ಹೇಳಿದ್ದಾಳೆ.

ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ರಾಜಕೀಯ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button