Kannada NewsKarnataka NewsLatest

*ಬಿಸಿಲ ಝಳ: ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಫಾರೆಸ್ಟ್ ರೇಂಜರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಕಬ್ನಿ ಹಿನ್ನೀರಿನಲ್ಲಿ ಈಜಲು ಹೋದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋಗಿ ಫಾರೆಸ್ಟ್ ರೇಂಜರ್ ಓರ್ವರು ಮೃತಪಟ್ಟಿದ್ದಾರೆ. ಹೆಚ್. ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್‌ (36) ಮೃತರು.

Home add -Advt

ಅರಣ್ಯ ಇಲಾಖೆಯ ಕ್ಯಾಂಪ್‌ ಮುಂಭಾಗವೇ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ. ಸುಪ್ರೀತ್‌ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ, ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಉದ್ಬೂರು ಗೇಟ್‌ ಬಳಿಯ ಕಳ್ಳಬೇಟೆ ತಡೆ ಶಿಬಿರದ ಸಮೀಪ ತಮ್ಮ ಇಬ್ಬರು ಸಹೋದ್ಯೋಗಿಗಳಾದ ಅಯ್ಯಪ್ಪ ಹಾಗೂ ಅಮನ್ ಎಂಬುವರೊಂದಿಗೆ ಈಜಲು ಹೋಗಿದ್ದರು. ಈ ವೇಳೆ ತೀವ್ರ ಆಯಾಸಗೊಂಡಿದ್ದ ಸುಪ್ರೀತ್‌ ತಾವು ದಡಕ್ಕೆ ಹೋಗುವುದಾಗಿ ಹೇಳಿ ನೀರಿನಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಣ್ದು ತಿಳಿದುಬಂದಿದೆ.

ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button