Karnataka News

*ರಾಸಲೀಲೆ ಕೇಸ್: DYSP ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ಕಚೇರಿಯಲ್ಲಿಯೇ ರಾಸಲೀಲೆ ನಡೆಸಿದ್ದ ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಡಿವೈ ಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಕಚೇರಿಯಲ್ಲಿಯೇ ಡಿವೈ ಎಸ್ ಪಿ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯವನ್ನು ಯಾರೋ ರೆಕಾರ್ಡ್ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಡಿವೈ ಎಸ್ ಯನ್ನು ಅಮಾನತುಗೊಳಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಡಿವೈ ಎಸ್ ಪಿ ರಾಮಚಂದ್ರಪ್ಪರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್,14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಡಿವೈಎಸ್ ಪಿ ಜೈಲುಸೇರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button