Kannada NewsKarnataka NewsLatest

*ಕಾಲೇಜು ವಿದ್ಯಾರ್ಥಿಯಿಂದ ಯುವತಿಯರೊಂದಿಗೆ ರಾಸಲೀಲೆ: ವಿಡಿಯೋ ವೈರಲ್*

ಆರೋಪಿ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿಯೊಬ್ಬ ಯುವತಿಯರೊಂದಿಗೆ ರಾಸಲಿಲೆ ನಡೆಸಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕೊಡಗಿಗೆ ಯುವತಿಯರನ್ನು ಕರೆದೊಯ್ದು ಯುವಕ ರಾಸಲೀಲೆ ನಡೆಸಿದ್ದಲ್ಲದೇ, ತನ್ನದೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಸ್ಥಳೀಯ ರಾಜಕಾರಿಣಗಳ ಪುತ್ರಿಯರು, ಅನ್ಯ ಧರ್ಮದ ಯುವತಿಯರೂ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.

Home add -Advt

ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಯುವಕನನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಮೂಲದ ಮೊಹಮ್ಮದ್ ಸವದ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಸಂಪಿಗೆಹಳ್ಳಿಯ ಯನಪೋಯ ಕಾಲೇಜಿನಲ್ಲಿ ಬಿಬಿಎಂ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಯುವತಿಯರನ್ನು ಕೊಡಗಿಗೆ ಕರೆದೊಯ್ದು ರಾಸಲೀಲೆ ನಡೆಸಿ ಅದರ ವಿಡಿಯೋ ಚಿತ್ರೀಕರಿಸಿಕೊಂಡು ವೈರಲ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.


Related Articles

Back to top button