Film & EntertainmentKannada NewsKarnataka News
*ವಿಮಾನ ತುರ್ತು ಭೂಸ್ಪರ್ಶ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ, ಶ್ರದ್ಧಾ ದಾಸ್*

ಪ್ರಗತಿವಾಹಿನಿ ಸುದ್ದಿ: ನಟಿ ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಮುಂಬೈನಿಂದ ಹೈದರಾಬಾದ್ ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ತಾವು ಪ್ರಾಣಾಪಾಯದಿಂದ ಪಾರಾಗಿದ್ದಾಗಿ ತಿಳಿಸಿದ್ದಾರೆ. ತಮ್ಮ ಎದುರಿನ ಸೀಟ್ ನ ಹಿಂಬದಿಯನ್ನು ಜೋರಾಗಿ ಕಾಲಿನಿಂದ ಒತ್ತಿ ಹಿಡಿದುಕೊಂಡು ತಾವು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ