ರಶ್ಮಿಕಾ ಕುಟುಂಬಕ್ಕೆ ಮತ್ತೊಂದು ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲ್ಲೇ ಇದೀಗ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ಜಾರಿ ಮಾಡಿದೆ.

ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ಮೈಸೂರಿನ ಐಟಿ ಕಚೇರಿಗೆ ದಾಖಲೆ ಸಾಮೇತ ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Home add -Advt

ಕೊಡಗಿನ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ಅವರ ಮನೆ ಹಾಗೂ ರಶ್ಮಿಕಾ ಕುಟುಂಬಸ್ಥರ ಕಲ್ಯಾಣ ಮಂಟಪದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಎರಡು ದಿನಗಾಳ ಕಾಲ ನಿರಂತರ ಪರಿಶೀಲನೆ ನಡೆಸಿದ್ದರು. ಈ ವೇಳೆ ದಾಖಲೆ ಇಲ್ಲದ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ರಶ್ಮಿಕಾ ಕುಟುಂಬದ ವಿರುದ್ಧ ತೆರಿಗೆ ವಂಚನೆ ಮಾಡಿರುವ ಆರೋಪ ಕೂಡ ಕೇಳಿಬಂದಿದೆ.

Related Articles

Back to top button