Latest

ಕಾಶ್ಮೀರಿ ಮುಸ್ಲಿಂ ಯುವತಿ ಪಾತ್ರದಲ್ಲಿ ರಶ್ಮಿಕಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಇದೀಗ ಬಹುಭಾಷಾ ನಟಿ. ಇಂದು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ. ರಶ್ಮಿಕಾ ಜನ್ಮದಿನದ ಸಂಭ್ರಮಕ್ಕೆ ಅಭಿಮಾನಿಗಳಿಗಾಗಿ ಅವರ ಹೊಸ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ರಶ್ಮಿಕಾ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಹನು ರಾಘವಪುಡಿ ನಿರ್ದೇಶನದ ಇನ್ನೂ ಹೆಸರಿಡದ ಹೊಸ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದು, ಕಾಶ್ಮೀರಿ ಮುಸ್ಲಿಂ ಯುವತಿಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಮಲಯಾಳಂ ಸ್ಟಾರ್ ನಟ ದುಲ್ಖರ್ ಸಲ್ಮಾನ್ ನಾಯಕ ನಟನಾಗಿ ಅಭಿನಯಿಸಿದ್ದಾರೆ.

ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಲಂಡನ್ ನ ಬಿಗ್ ಬೇನ್ ಗಡಿಯಾರದ ಬಳಿ ಸುಡುತ್ತಿರುವ ಕಾರುಗಳ ಮಧ್ಯೆ ನಡೆದು ಹೋಗುವ ದೃಶ್ಯ ಗಮನ ಸೆಳೆಯುತ್ತಿದೆ.
22 ಯೂಟ್ಯೂಬ್ ಚಾನಲ್ ಬ್ಯಾನ್

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button