Karnataka NewsLatestPolitics

*1,80,000ಕ್ಕೂ ಹೆಚ್ಚು ರೈತರ RTCಗಳಲ್ಲಿ ವಕ್ಫ್ ಉಲ್ಲೇಖ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ರೈತರ ಜಮೀನುಗಳ ದಾಖಲೆಗಳಲ್ಲಿ ಯಾವುದೇ ಪೂರ್ವಸೂಚನೆ ಇಲ್ಲದೆ ವಕ್ಫ್‌ ಹೆಸರು ನಮೂದಾಗಿರುವುದು ಈ ಹಿಂದೆ ಭಾರಿ ಚರ್ಚೆಗೆ ಕಾರಣವಗಿತ್ತು. ಇದೀಗ ಇದೇ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಈ ವಿಷಯ ಪ್ರಸ್ತಾಪಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯದ 1,80,000ಕ್ಕೂ ಹೆಚ್ಚು ರೈತರ RTCಗಳಲ್ಲಿ ಈಗಾಗಲೇ ವಕ್ಫ್ ಉಲ್ಲೇಖ ದಾಖಲಾಗಿದೆ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​, ಆರೋಪಿಸಿದ್ದಾರೆ. ರೈತರ ಭೂಮಿಯನ್ನು ವಕ್ಫ್ ವಿವಾದಕ್ಕೆ ಸಿಲುಕಿಸಿ, ಕಾಂಗ್ರೆಸ್ ಸರ್ಕಾರ ಯಾರ ಹಿತ ಕಾಯುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಹಂತಕ್ಕೆ ತಲುಪಿದೆ. ರಾಜ್ಯದಾದ್ಯಂತ ರೈತರ RTCಗಳ ಕಾಲಂ 11ರಲ್ಲಿ ವಕ್ಫ್ ಉಲ್ಲೇಖಗಳನ್ನು ದಾಖಲಿಸಲಾಗುತ್ತಿದೆ ಎಂಬ ವರದಿಗಳು ಹೊರಬಿದ್ದಿದ್ದು, ಲಕ್ಷಾಂತರ ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇದು ಕೇವಲ ದಾಖಲೆ ಬದಲಾವಣೆಯ ವಿಚಾರವಲ್ಲ. ಇದು ರೈತನ ಮಾಲೀಕತ್ವದ ಹಕ್ಕು, ಬದುಕು ಮತ್ತು ಭವಿಷ್ಯದ ಪ್ರಶ್ನೆ ಎಂದವರು ತಿಳಿಸಿದ್ದಾರೆ.ರಾಜ್ಯದ 1,80,000ಕ್ಕೂ ಹೆಚ್ಚು ರೈತರ RTCಗಳಲ್ಲಿ ಈಗಾಗಲೇ ವಕ್ಫ್ ಉಲ್ಲೇಖ ದಾಖಲಾಗಿದೆ. ಒಟ್ಟು 3,00,000 RTCಗಳನ್ನು ಈ ಪ್ರಕ್ರಿಯೆಯ ವ್ಯಾಪ್ತಿಗೆ ತರಲು ಕ್ರಮ ನಡೆಯುತ್ತಿದೆ ಎನ್ನಲಾಗಿದೆ. 31 ಜಿಲ್ಲೆಗಳ ರೈತರು ಇದರ ಪರಿಣಾಮಕ್ಕೆ ಒಳಗಾಗುವ ಆತಂಕದಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button