Latest

*ಡೆಂಗ್ಯೂ ಮಹಾಮಾರಿ ಬೆನ್ನಲ್ಲೇ ರಾಜ್ಯದಲ್ಲಿ ‘ಇಲಿ ಜ್ವರ’ ಪತ್ತೆ: 12 ವರ್ಷದ ಬಾಲಕನಿಗೆ ಸೋಂಕು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಒಂದೆಡೆ ಮಳೆ ಅಬ್ಬರ ಹೆಚ್ಚಾಗಿದ್ದರೆ ಮತ್ತೊಂದೆ ರಾಜ್ಯಾದ್ಯಂತ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಡೆಂಘೀ, ಝೀಕಾ ವೈರಸ್, ಚಿಕನ್ ಗುನ್ಯಾ ನಡುವೆ ಇದೀಗ ಇಲಿ ಜ್ವರ ಪತ್ತೆಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಬಾಲಕನೊಬ್ಬ ಇಲಿ ಜ್ವರದಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾವೇರಿಯ ಗ್ರಾಮವೊಂದರ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕ ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖನಾಗಿದ್ದ ಬಾಲಕನಲ್ಲಿ ದಿನಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದೆ. ಇದರಿಂದ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನಿಗೆ ಜಾಂಡೀಸ್ ಇರಬಹುದು ಎಂದು ರಕ್ತ ತಪಾಸಣೆ ನಡೆಸಿದಾಗ ಇಲಿ ಜ್ವರ ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

Home add -Advt


Related Articles

Back to top button