Kannada NewsKarnataka NewsNationalPolitics

*ರತನ್ ಟಾಟಾ ನಿಧನ: ಒಂದು ದಿನ ಶೋಕ -ಸಿಎಂ ಏಕನಾಥ ಶಿಂಧೆ*

ಪ್ರಗತಿವಾಹಿನಿ ಸುದ್ದಿ: ರತನ್ ಟಾಟಾ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಎಲ್ಲೆಡೆಯಿಂದ ಸಂತಾಪ ವ್ಯಕ್ತವಾಗುತ್ತಿದೆ. ಇಂದೇ ರತನ್ ಜೀ ಅಂತ್ಯಕ್ರಿಯೆ ನಡೆಯಲಿದೆ. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

150 ವರ್ಷಗಳ ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆಯಾಗಿದ್ದರು. ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಶಿಂಧೆ ಹೇಳಿದ್ದಾರೆ.ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ ಇರಲಿದ್ದು, ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಶಿಂದೆ ತಿಳಿಸಿದ್ದಾರೆ.

Home add -Advt

ಇಂದು ಸಂಜೆ 5 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಸಂಜೆ 4 ರವರೆಗೆ ದಕ್ಷಿಣ ಮುಂಬೈನ ರಾಷ್ಟ್ರೀಯ ಲಲಿತ ಕಲಾ ಕೇಂದ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ಸ್ಥಳದ ಬಗ್ಗೆ ಕುಟುಂಬಸ್ಥರಿಂದ ಇನ್ನೂ ಕೂಡ ಯಾವುದೇ ಅಧಿಕೃತ ನಿರ್ಧಾರವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Back to top button