Karnataka News

*ಮೈಸೂರು ದಸರಾ: ನಂದಿ ಧ್ವಜಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಮನೆಯ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ವಿಶ್ವವಿಖ್ಯಾತ ಜಂಬೂಸವಾರಿಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಇವೆ. ಜಂಬೂಸವಾರಿಗೆ ಚಾಲನೆ ನೀಡುವ ಮುನ್ನ, ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪುಷ್ಫಾರ್ಚನೆ ಮಾಡಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಮಂಕಾಳು ವೈದ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಲವೇ ಹೊತ್ತಲ್ಲಿ 750 ಕೆಜಿ ತೂಕದ ಚಾಮುಂಡಿ ವಿಗ್ರಹವುಳ್ಳ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ಸಾಗಲಿದೆ. ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ.


Home add -Advt

Related Articles

Back to top button