Kannada NewsKarnataka NewsNationalPolitics

*ಪಡಿತರ ಅಕ್ಕಿ ನಾಪತ್ತೆ ಕೇಸ್: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯಲ್ಲಿ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ಗೋದಾಮಿನಿಂದ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.‌

ಅಕ್ಕಿ ಕಳ್ಳತನ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು,  ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಗೋದಾಮಿನಲ್ಲಿ ಅನ್ನಭಾಗ್ಯದ ಅಕ್ಕಿ ಪತ್ತೆಯಾದ ಹಿನ್ನಲೆಯಲ್ಲಿ ಶಹಾಪೂರ ಪೊಲೀಸ್ ಬಿಜೆಪಿ ಮುಖಂಡ ಮಣಿಕಠ ರಾಥೋಡ ಅವರಿಗೆ ಹಲವು ಭಾರಿ ನೋಟಿಸ್‌ ನೀಡಿದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಶಹಾಪೂರ ಪೊಲೀಸರು ಕಲಬುರಗಿ ನಗರದಲ್ಲಿ ಮಣಿಕಂಠನನ್ನು ಬಂಧಿಸಿದ್ದಾರೆ.

Home add -Advt

ಅಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಪುರ ಡಿವೈಎಸ್ಪಿ ಜಾವೇದ್‌ ಇನಾಂದಾ‌ರ್ ತನಿಖೆ ನಡೆಸುತ್ತಿದ್ದಾಗ ಬಂಧಿತ ಆರೋಪಿಗಳಾದ ರಾಜು ರಾಠೋಡ ಹಾಗೂ ಮಣಿಕಂಠ ರಾಠೋಡ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದರಿಂದ ಅವರನ್ನು ಬಂಧಿಸಲಾಗಿದೆ’ ಎಂದು ಶಹಾಪುರ ಠಾಣೆಯ ಪಿಐ ಎಸ್‌.ಎನ್. ಪಾಟೀಲ ಮಾಹಿತಿ ನೀಡಿದ್ದಾರೆ.

Related Articles

Back to top button