Kannada NewsKarnataka NewsLatest

*ಪಡಿತರ ಅಕ್ಕಿ ಕಳ್ಳತನ ಪ್ರಕರಣ; ದೂರುದಾರ ಅಧಿಕಾರಿಯೇ ಆರೋಪಿ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಪಡಿತರ ಅಕ್ಕಿ ಕಳ್ಳತನ ಪ್ರಕ್ರಣದಲ್ಲಿ ದೂರು ನೀಡಿದ್ದ ಅಧಿಕಾರಿಯೇ ಆರೋಪಿಯಾಗಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಪಡಿತರ ಅಕ್ಕಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಶಹಾಪುರದ ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ 2 ಕೋಟಿ 66 ಲಕ್ಷ ಮೌಲ್ಯದ 6,077 ಕಿಂಟ್ವಾಲ್ ಅಂಕಿ ಕಳ್ಳತನವಾಗಿತ್ತು.

ಅಕ್ಕಿ ಕಳ್ಳತನವಾಗಿದೆ ಎಂದು ಯಾದಗಿರಿಯ ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಭೀಮರಾಯ ಮಸಾಲಿ ದೂರನ್ನು ನೀಡಿದ್ದರು. ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅಸಲಿ ಸತ್ಯ ಬಾಯ್ಬಿಟ್ಟಿದ್ದಾರೆ. ಕಳ್ಳತನ ಮಾಡಿದ್ದ ಅಕ್ಕಿಯಿಂದ ಬಂದ ಹಣವನ್ನು ಆರೋಪಿಗಳು ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಿಗೂ ಪಾಲು ಕೊಡುತ್ತಿದ್ದರು. ಭೀಮರಾಯ ಮಸಾಲಿ ಹಾಗೂ ಈ ಹಿಂದಿನ ಡಿಡಿ ಪ್ರಭು ದೊರೆ ಪ್ರತಿ ತಿಂಗಳು 50 ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದರು. ಡಿಡಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೆಟರ್ ಆಗಿರುವ ಮಲ್ಲೇಶ ಎಂಬಾತನ ಮೂಲಕ ಹಣ ಕೊಡಲಾಗುತ್ತಿತ್ತು ಎಂದು ಬಾಯ್ಬಿಟ್ಟಿದ್ದಾರೆ.

ಫುಡ್ ಇನ್ಸ್ ಪೆಕ್ಟರ್ ಗಳು, ಶಿರಸ್ತೇದಾರರು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಎ1 ಆರೋಪಿ ಶಿವಯ್ಯ ಎಂಬಾತನಿಂದಲೇ ಫೋನ್ ಪೇ ಮೂಲಕ ಹಣ ವರ್ಗಾವಣೆಯಾಗುತ್ತಿತ್ತು ಎಂಬುದು ವಿಚಾರಣೆಯಿಂದ ಬಯಲಾಗಿದೆ. ಸದ್ಯ ಅಕ್ಕಿ ಕಳ್ಳತನ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button