Latest

*11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಬಿರುಬೇಸಿಗೆಯ ಧಗೆ ಹೆಚ್ಚಾದ್ರು, ಮುಂದಿನ 2 ದಿನ ಮತ್ತಷ್ಟು ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Home add -Advt

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಹಾಸನ ಜಿಲ್ಲೆಯಲ್ಲಿ ಏಪ್ರಿಲ್ 10ರವರೆಗೆ 5-20 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಶಿವಮೊಗ್ಗ ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ 5-10 ಮಿ.ಮೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

Related Articles

Back to top button