Kannada NewsKarnataka News

*ರೇವ್ ಪಾರ್ಟಿ ಕೇಸ್: ನಟಿ ಹೇಮಾ ಸೇರಿ ಐವರಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

Home add -Advt

ರೇವ್ ಪಾರ್ಟಿ ಪ್ರಕರಣದಲ್ಲಿ ರಕ್ತದ ಪರೀಕ್ಷೆ ಮಾಡಿಸಿದಾಗ ತೆಲುಗು ನಟಿ ಹೇಮಾ ಸೇರಿದಂತೆ 86 ಜನರ ರಿಪೋರ್ಟ್ ನಲ್ಲಿ ಡ್ರಗ್ ಸೇವಿಸಿರುವುದು ದೃಢವಾಗಿತ್ತು. ಹೀಗಾಗಿ ನಟಿ ಹೇಮಾ ಸೇರಿದಂತೆ ಐವರಿಗೆ ಮೇ 27ಕ್ಕೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. 

ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

Related Articles

Back to top button