Latest

*ರೇವ್ ಪಾರ್ಟಿ ಪ್ರಕರಣ: ಸಚಿವರು, ಎಂಎಲ್ ಎ ಆಪ್ತರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ, ಎಂಎಲ್ ಸಿ ಯ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt

ಆಂಧ್ರಪ್ರದೇಶ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹಾಗೂ ಎಂ ಎಲ್ ಎ ಶ್ರೀಕಾಂತ್ ರೆಡ್ಡಿ ಆಪ್ತರನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಮೇ 19ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ನಡೆದಿದ್ದು, ಸಿಸಿಬಿ ದಾಳಿ ವೇಳೆ 103 ಜನರು ಸಿಕ್ಕಿಬಿದ್ದಿದ್ದರು. 86ಕ್ಕೂ ಹೆಚ್ಚು ಜನರು ಡ್ರಗ್ಸ್ ಸೇವಿಸಿರುವುದು ರಕ್ತದ ಮಾದರಿ ಪರೀಕ್ಷೆಯಲ್ಲಿ ಬಯಲಾಗಿದೆ. ತೆಲುಗಿನ ನಟಿ ಹೇಮಾ, ಆಶು ರಾಯ್ ಸೇರಿದಂತೆ ಹಲವರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.


Related Articles

Back to top button