ಪ್ರಗತಿವಾಹಿನಿ ಸುದ್ದಿ: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತನ ಹುಟ್ಟುಹಬ್ಬದ ಆಚರಣೆ ಹೆಸರಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಸಿಸಿಬಿ ಪೊಲೀಸರು ನಡೆಸಿದ್ದ ದಾಳಿಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಸೇರಿದಂತೆ 103 ಜನರು ಸಿಕ್ಕಿಬಿದ್ದಿದ್ದರು. ಈ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆಯಿಂದ ಹೆಬ್ಬಗೋಡಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇದೀಗ ಪ್ರಕರಣ ಸಂಬಂಧ 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪ್ರಮುಖ ಆರೋಪಿ ವಾಸು, ಅರುಣ್ ಕುಮಾರ್, ನಾಗಬಾಬು, ರಣಧೀರ್ ಬಾಬು, ಮೊಹಮ್ಮದ್ ಅಬೂಬಕ್ಕರ್, ಗೋಪಾಲ ರೆಡ್ಡಿ ಹಾಗೂ 68 ಜನ ಪುರುಷರು, 30 ಯುವತಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
ರೇವ್ ಪಾರ್ಟಿಯಲ್ಲಿ ದೊಡ್ಡ ಮತ್ಟದಲ್ಲಿ ಮಾದಕವಸ್ತು ಸರಬರಾಜಾಗಿದೆ ಎಂದು ತಿಳಿದುಬಂದಿದೆ. ಇನ್ನು ದಾಳಿ ವೇಳೆ ಕೊಕೇನ್ ಲೇಪನವಿರುವ 500 ಮುಖಬೆಲೆಯ ಒಂದು ನೋಟು, 6 ಗ್ರಾಂ ಹೈಡ್ರೋ ಗಾಂಜಾ, 5 ಮೊಬೈಲ್ ಗಳು, ಎರಡು ಐಷಾರಾಮಿ ಕಾರುಗಳು ಪತ್ತೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ