ಪ್ರಗತಿವಾಹಿನಿ ಸುದ್ದಿ; ಹಾಸನ: 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದ್ದರೂ ನಿಯಮ ಉಲ್ಲಂಘನೆ ಮಾಡಿ ಹಾಸನ ಜಿಲ್ಲಿಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿ ಸಿಕ್ಕಿಬಿದ್ದಿದ್ದ ಮಂಗಳೂರಿನ ಸೈಬರ್ ಕ್ರೈಂ ಠಾಣೆಯ ಮಹಿಳಾ ಹೆಡ್ ಕಾನ್ಸ್ ಟೇಬಲ್ ಅವರನ್ನು ಅಮಾನತು ಮಾಡಲಾಗಿದೆ.
ಶ್ರೀಲತಾ ಅಮಾನತಾದ ಮಹಿಳಾ ಹೆಡ್ ಕಾನ್ಸ್ ಟೇಬಲ್. ಏಪ್ರಿಲ್ 10ರಂದು ಹಾಸನ ಜಿಲ್ಲೆಯ ಆಲೂರಿನ ಹೈದೂರು ಗ್ರಾಮದ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಖಚಿತ ಮಾಹಿತಿ ಆದಾರದ ಮೇಲೆ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ದಾಳಿ ನಡೆಸಿದ್ದರು. ದಾಳಿಯಲ್ಲಿ ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ಮಾದಕ ವಸ್ತುಗಳ ಜೊತೆಗೆ 24 ಮಹಿಳೆಯರು ಸೇರಿದಂತೆ 134 ಜನರನ್ನು ಬಂಧಿಸಲಾಗಿತ್ತು.
ಈ ದಾಳಿಯಲ್ಲಿ ಮಹಿಳಾ ಹೆಡ್ ಕಾನ್ಸ್ ಟೇಬಲ್ ಶ್ರೀಲತಾರನ್ನು ಕೂಡ ಬಂಧಿಸಲಾಗಿತ್ತು. ಶ್ರೀಲತಾ ಪುತ್ರ ಅತುಲ್ ಈ ರೇವ್ ಪಾರ್ಟಿ ಆಯೋಜನೆಯ ಪ್ರಮುಖ ಆರೋಪಿ ಎಂಬುದು ವಿಚಾರಣೆಯಿಂದ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀಲತಾ ಅವರನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಸಮುದಾಯಕ್ಕೆ ಹರಡಿದೆ ಕೊರೊನಾ; ಸಚಿವ ಸುಧಾಕರ್ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ