ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಶಾಲೆಯ ಜೀವನದಿಂದಲೇ ಸಿದ್ಧತೆ ಮಾಡಿಕೊಳ್ಳಿ – ರವಿ ಭಜಂತ್ರಿ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರತಿ ವರ್ಷ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲೆಗಳು ಹಾಗೂ ಅನುದಾನಿತ ಶಾಲೆಗಳಲ್ಲಿನ 8ನೇ ಹಾಗೂ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ NTSC ಹಾಗೂ NMMS ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ತಲಾ 1000/-ರೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
NMMS ಪರೀಕ್ಷೆಯಲ್ಲಿ ನಗರ ವಲಯದಲ್ಲಿ 52 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇವರಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾಧನೆ ಮಾಡಿದ್ದಾರೆ.
ಸರ್ಕಾರಿ ಶಾಲೆಗಳ ಶಿಕ್ಷಕರು ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರೋತ್ಸಾಹಿಸುತ್ತಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೂಳ್ಳಬೇಕೇಂದು ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ತಿಳಿಸಿದರು.
ಪುಸ್ತಕ ಓದುವ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡು KAS, IAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಶಾಲೆಯ ಜೀವನದಿಂದಲೇ ಓದುವ ಹವ್ಯಾಸ ಬೆಳಸಿಕೂಳ್ಳಬೇಕೆಂದು ಹೇಳಿದರು.
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ರಾಜೇಂದ್ರ ಭಂಡಾರಿ, ಮಡಿವಾಳಿ ಅಂಗಡಿ, ಎನ್ ಎಮ್ ಮದನಬಾವಿ ಹಾಗೂ ಸಿ ಪಿ ದೇವರುಷಿ ಈ ಶಿಕ್ಷಕರನ್ನು ಇಲಾಖೆ ವತಿಯಿಂದ ರವಿ ಭಜಂತ್ರಿ ಸನ್ಮಾನಿಸಿದರು.
NMMS ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪುಷ್ಪ ನೀಡಿ ಗೌರವಿಸಿದರು. ಈ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಆಪ್ ವೇನುಗ್ರಾಮದ ಅಧ್ಯಕ್ಷರಾದ ಅರವಿಂದ ಖಡಬಡಿ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯವಾಗುವ ಪುಸ್ತಕಗಳನ್ನು ಶಾಲೆಗಳಿಗೆ ನೀಡಿದರು.
ರಿಜ್ವಾನ್ ನವಗೇಕರ, ವಿನಯಕುಮಾರ ಬಾಳಿಕಾಯಿ, ಪ್ರಸಾದ ಕಟ್ಟಿ, ಸೋಮನಾಥ ಕುಡಚೀಕರ, ಬಿ ಆರ್ ಮಠಪತಿ, ಬಿ ಸಿ ಮುದಕನಗೌಡ್ರ, ಜಿ ಬಿ ತಿಗಡಿ, ಪರವಿನ ನದಾಫ, ಎಮ್ ಕೆ ಮಾದಾರ, ಸುನೀಲ ಕಾಜಗಾರ, ಸುನೀಲ ಖೋತ, ಎಸ್ ಜಿ ಪಾಟೀಲ, ಆರ್ ಎಸ್ ಮೋರೆ ಕಾರ್ಯಕ್ರಮಕ್ಕೆ ಉಪಸ್ಥಿತರಿದ್ದರು. ಎಮ್ ಎಸ್ ದೇಶನೂರ ನಿರೂಪಿಸಿದರು. ಈ ಕಾರ್ಯಕ್ರಮಕ್ಕೆ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ – ಪೊಲೀಸರಿಗೆ ಬೊಮ್ಮಾಯಿ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ