
ಪ್ರಗತಿವಾಹಿನಿ ಸುದ್ದಿ: ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದ ಶಾಸಕ ರವಿ ಗಣಿಗ ವಿರುದ್ಧ ಕೊಡವ ನ್ಯಾಷನಲ್ ಸಂಘಟನೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.
ರಶ್ಮಿಕಾ ಮಂದಣ್ಣ ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದಿಂದ ಬಂದವರು. ರಾಷ್ಟ್ರಮಟ್ಟದಲ್ಲಿ ಯಶಸ್ವಿಯಾಗಲು ಅವರ ಸ್ವಂತ ಪರಿಶ್ರಮ ಕಾರಣ. ಹೀಗಿರುವಾಗ ಶಾಸಕ ರವಿ ಗಣಿಗ ರಶ್ಮಿಕಾ ಮಂದಣ್ಣ ವಿಚಾರ ಅನಗತ್ಯವಾಗಿ ಪ್ರಸ್ತಾಪಿಸಿ ಅನಗತ್ಯ ವಿವಾದ ಮಾಡ್ತಾ ಇದ್ದಾರೆ ಎಂದು ಕೊಡವ ನ್ಯಾಷನಲ್ ಸಂಘಟನೆ ಮುಖ್ಯಸ್ಥ ನಾಚಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ರವಿ ಗಣಿಗ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.