Belagavi NewsBelgaum NewsKarnataka NewsLatest

*ಸಾಹಿತಿ ರವಿ ಕೋಟಾರಗಸ್ತಿ ಅವರಿಗೆ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಾಹಿತಿ, ರಂಗಭೂಮಿ ಸಂಘಟಕ, ಕನ್ನಡ ಸಂಘಟನೆ ಹಾಗೂ ಧಾರ್ಮಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ರವಿ ಕೊಟಾರಗಸ್ತಿ ಅವರಿಗೆ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಷ್ಟೇ ಅಲ್ಲದೇ ನವೆಂಬರ್28 ರಂದು ಸಮ್ಮೇಳನದಲ್ಲಿ ಕರಕುಶಲ, ಖಾದಿ ಮಳಿಗೆಯನ್ನ ಸಾಹಿತ್ಯ ರವಿ ಕೋಟಾರಗಸ್ತಿ ಅವರು ಉದ್ಘಾಟಿಸಲಿದ್ದಾರೆ.

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಅಂಗವಾಗಿ ನವೆಂಬರ್ 29ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನವು ಕಳೆದ 37 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯ ಸಂರಕ್ಷಣೆ ಹಾಗೂ ಪ್ರಚಾರಕ್ಕಾಗಿ ಶ್ರಮಿಸುತ್ತಿದೆ. ಕನ್ನಡ ನಾಡಿನ ಹಾಗೂ ದೇಶ-ವಿದೇಶಗಳ ಕನ್ನಡ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಸಾಂಸ್ಕೃತಿಕ ವಿನಿಮಯಕ್ಕೂ ಪ್ರೋತ್ಸಾಹ ನೀಡುತ್ತಿದೆ.

ಎರಡು ದಿನಗಳ ಸಮ್ಮೇಳನದಲ್ಲಿ ಕೇರಳ ಭವನದ ಭೂಮಿಪೂಜೆ, ಶಿಲಾನ್ಯಾಸ ಸೇರಿದಂತೆ ವಿವಿಧ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 29ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ ಸ್ವೀಕರಿಸಲು ರವಿ ಕೋಟಾರಗಸ್ತಿ ಅವರಿಗೆ ಪ್ರತಿಷ್ಠಾನದ ವತಿಯಿಂದ ಆಹ್ವಾನಿಸಲಾಗಿದೆ.

ಕಳೆದ ಐದು‌ ದಶಕಗಳಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಹಿತ್ಯ,ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Back to top button