
ಪ್ರಗತಿವಾಹಿನಿ ಸುದ್ದಿ: ಭೋವಿ ನಿಗಮದಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.
ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿ ಕುಮಾರ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರವಿಕುಮಾರ್ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.