Latest

ಮತ್ತಿಬ್ಬರು ಸಚಿವರ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇದೀಗ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಿದ್ದು, ರವಿಶಂಕರ್ ಪ್ರಸಾದ್ ಹಾಗೂ ಪ್ರಕಾಶ್ ಜಾವಡೇಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಿರಿಯ ಸಚಿವರುಗಳಿಗೆ ಕೊಕ್ ನೀಡಿರುವ ಪ್ರಧಾನಿ ಮೋದಿ, ಯುವ ಪಡೆಗಳಿಗೆ ಸಂಪುಟದಲ್ಲಿ ಸ್ಥಾನ ನಿಡಲು ಮುಂದಾಗಿದ್ದು, 43 ಸಂಸದರು ನೂತನವಾಗಿ ಮೋದಿ ಕ್ಯಾಬಿನೆಟ್ ಗೆ ಸೇರ್ಪಡೆಯಾಗಲಿದ್ದಾರೆ. ಸಂಪುಟ ಪುನಾರಚನೆ ಬೆನ್ನಲ್ಲೇ ಇದೀಗ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹಾಗೂ ಪರಿಸರ, ಅರಣ್ಯ, ಹವಾಮಾನ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ರಾಜೀನಾಮೆ ನೀಡಿದ್ದಾರೆ.

ಈವರೆಗೆ ಒಟ್ಟು 12 ಸಚಿವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಂಪುಟದ ನೂತನ ಸಚಿವರ ಪಟ್ಟಿ ಇಲ್ಲಿದೆ…

ಕೇಂದ್ರ ಸಂಪುಟಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button