Kannada NewsLatestNationalPolitics

*ಭಾಷಣ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದ ಸಚಿವರು*

ಪ್ರಗತಿವಾಹಿನಿ ಸುದ್ದಿ: ಗಣರಾಜ್ಯೋತ್ಸವದ ಭಾಷಣ ಮಾಡುತ್ತಿದ್ದಾಗಲೇ ಸಚಿವರೊಬ್ಬರು ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ.

ಕೇರಳದ ಕಣ್ಣೂರಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸಚಿವ ರಾಮಚಂದ್ರನ್ ಕಡನಪಲ್ಲಿ ಧ್ವಜಾರೋಹಣದ ಬಳಿಕ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಭಾಷಣ ಮಾಡುತ್ತಿದ್ದಾಗಲೇ ಹಿಮ್ಮುಖರಾಗಿ ಸಚಿವರು ಬೀಳುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದುಕೊಂಡಿದ್ದಾರೆ. ತಕ್ಷಣ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button