Kannada NewsLatestNational

*ತಾಯಿಗೆ ಬೆಂಕಿ ಹಚ್ಚಿ ಹತ್ಯೆಗೈದ ಮಗ*

ಪ್ರಗತಿವಾಹಿನಿ ಸುದ್ದಿ; ರಾಯಗಢ: ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ಹೆತ್ತ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘೋರ ಘಟನೆ ಮಹಾರಾಷ್ಟ್ರದ ರಾಯಗಢದ ದೇವದಂಡ ಬಳಿಯ ನವಖರ್ ಗ್ರಾಮದಲ್ಲಿ ನಡೆದಿದೆ.

Home add -Advt

ತಾಯಿ ಮಗನ ಮಧ್ಯೆ ಊಟದ ವಿಚರವಾಗಿ ಜಗಳ ಆರಂಭವಾಗಿದೆ. ಇದೇ ಕಾರಣಕ್ಕೆ ಕೋಪದ ಬರದಲ್ಲಿ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ. ಗಂಭೀರವಗೈ ಸುಟ್ಟ ಗಾಯಗಳಿಮ್ದ ಬಳಲುತ್ತಿದ್ದ ಮಹಿಳೆಯನ್ನು ಅಲಿಭಾಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ.

ಚಂಗುನಾ ನಾಮದೇ ಖೋಟ್ ಮೃತ ಮಹಿಳೆ. 26 ವರ್ಷದ ಜಯೇಶ್ ತಾಯಿಯನ್ನೇ ಕೊಂದ ಮಗ. ರಾತ್ರಿ ಊಟದ ವಿಚಾರವಾಗಿ ತಾಯಿ ಮಗನ ಮಧ್ಯೆ ಜಗಳ ನಡೆದಿದ್ದು, ಮಗ ತಾಯಿಯನ್ನು ಥಳಿಸಿದ್ದಾನೆ. ಅಷ್ಟೇ ಅಲ್ಲ ಆಕೆಯನ್ನು ಮನೆಯಿಂದ ಹೊರಗೆಳೆದು ತಂದು ಕಣ್ಣಿಗೆಗಳನ್ನು ತಂದು ಸಂಗ್ರಹಿಸಿ ತಾಯಿಗೆ ಬೆಂಕಿ ಹಚ್ಚಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧವೈಸಿದ ರಾಯಘಡ ಪೊಲೀಸರು ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಜಯೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.


Related Articles

Back to top button