ಸಂಗೊಳ್ಳಿ ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಬೆಳೆಯಲಿ: ಶಾಸಕ ಮಹಾಂತೇಶ ಕೌಜಲಗಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಂಗೊಳ್ಳಿ ರಾಯಣ್ಣ ಅವರ ಪ್ರಾಮಾಣಿಕತೆ, ದೇಶಪ್ರೇಮ, ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಉತ್ಸವ ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಉತ್ಸವವಾಗಿ ಬೆಳೆಯಲಿದೆ ಎಂದು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ತಿಳಿಸಿದರು.
ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಜ.12) ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2023 ರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಕೇವಲ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮ ನಡೆಸುವುದಲ್ಲ. ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ ರಾಯಣ್ಣನಿಗೆ ಗೌರವ ಸೂಚಿಸುವ ಉದ್ದೇಶವಾಗಿದೆ ಎಂದು ತಿಳಿಸಿದರು.
ಇತಿಹಾಸ ಪರಿಚಯಕ್ಕೆ ರಾಕ್ ಗಾರ್ಡನ್ ನಿರ್ಮಾಣ:
ರಾಯಣ್ಣನ ಇತಿಹಾಸ ಪರಿಚಯಿಸಲು ಸಂಗೊಳ್ಳಿಯಲ್ಲಿ ಸುಮಾರು 13 ಕೋಟಿ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ ಈಗಾಗಲೇ ಶಾಲೆಯಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ ಎಂದು ಶಾಸಕ ಮಹಾಂತೇಶ ಕೌಜಲಗಿ ಅವರು ತಿಳಿಸಿದರು.
ದೇಶಾಭಿಮಾನ ಬೆಳೆಸಿಕೊಳ್ಳಿ:
ಬ್ರಿಟಿಷ್ ಕಂಪನಿ ವಿರುದ್ಧ ಹೋರಾಡಿದ ದೇಶದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಬಂಟನಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶಕ್ಕೆ ಸ್ವಾತಂತ್ರ್ಯ ತರಲು ನಿರಂತರ ಹೋರಾಟ ನಡೆಸಿದ್ದಾರೆ
ಕಂದಾಯ ಕೇಳುವ ಬ್ರಿಟಿಷ್ ಅಧಿಕಾರಿಗಳಿಗೆ ವಿರುದ್ಧ ದಂಗೆ ಏಳುವ ಮೂಲಕ ಸ್ವಂತ ನಾಡಿನಲ್ಲಿ ಕಂದಾಯ ಕೊಡಲು ಸಾಧ್ಯವಿಲ್ಲ ಎಂದು ದಿಟ್ಟತನದಿಂದ ಹೋರಾಡಿದ ಮಹಾನ್ ಚೇತನ ಸಂಗೊಳ್ಳಿ ರಾಯಣ್ಣನವರು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ತಿಳಿಸಿದರು.
ರಾಷ್ಟ್ರದ ಅಭಿಮಾನಿ ಸಂಗೋಳ್ಳಿ ರಾಯಣ್ಣ ದೇಶಕ್ಕೆ ಸ್ವಾಭಿಮಾನ, ದೇಶಭಕ್ತಿ ಗುಣಗಳನ್ನು ತೋರಿಸಿಕೊಟ್ಟಿದ್ದಾರೆ. ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗುತ್ತಿದೆ ಸಂಗೊಳ್ಳಿ ರಾಯಣ್ಣ ದಿಟ್ಟತನ ದೇಶಪ್ರೇಮ ಯುವ ಪೀಳಿಗೆ ಬೇಳಿಸಿಕೊಳ್ಳಬೇಕು ಎಂದು ದೊಡ್ಡಗೌಡರ ಅವರು ತಿಳಿಸಿದರು.
ನಂದಗಡ ಮ್ಯೂಸಿಯಂ ನಿರ್ಮಾಣ:
ಪುಟ್ಟ ಸಂಸ್ಥಾನಕ್ಕಾಗಿ ಸ್ವಾತಂತ್ರ್ಯ ಹೋರಾಟ ನಡೆಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಬಲಗೈ ಬಂಟನಾದ ಸಂಗೋಳ್ಳಿ ರಾಯಣ್ಣ ಚರಿತ್ರೆಯಲ್ಲಿ ಅಜರಾಮರವಾಗಿದ್ದರೆ.
ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚನ್ನಮ್ಮರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸುವರ್ಣ ವಿಧಾನ ಸೌಧದ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಸರ್ಕಾರದಿಂದ ನಂಡಗಡದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಹೇಳಿದರು.
ಕಿತ್ತೂರು ಸಂಸ್ಥಾನ ಉಳಿಸಿಕೊಳ್ಳಲು ಬ್ರಿಟಿಷ್ ಕಂಪನಿ ವಿರುದ್ಧ ಹೋರಾಡಿ ಇಡೀ ದೇಶಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ವ್ಯಕ್ತಿಯಾಗಿದ್ದಾರೆ. ಸಂಗೋಳ್ಳಿ ರಾಯಣ್ಣ ತನ್ನದೇ ಆದ ವೀರ ಪಡೆ ಸಂಘಟಿಸಿ, ಬ್ರಿಟಿಷ್ ವಿರುದ್ಧ ನಿರಂತರ ಹೋರಾಟ ನಡೆಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಗೊಳ್ಳಿ ಹಿರೇಮಠ ಸಂಸ್ಥಾನದ ಗುರುಗಳಾದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮಿಜಿ,
ಕಿತ್ತೂರು ಸಂಸ್ಥಾನ ಕಲ್ಮಠದ ರಾಜ ಗುರುಗಳಾದ ಶ್ರೀ ಮಡಿವಾಳ ರಾಜ ಯೋಗೇಂದ್ರ ಮಹಾಸ್ವಾಮಿಗಳು,
ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಎಂ ನಾಗರಾಜ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಬೈಲಹೊಂಗಲ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಬಸವರಾಜ ನಾಗರಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬೈಲಹೊಂಗಲ ಉಪವಿಭಗಾಧಿಕಾರಿ ಶಶಿಧರ ಬಗಲಿ ಸ್ವಾಗತಿಸಿದರು. ಸುನೀತಾ ದೇಸಾಯಿ ನಿರೂಪಿಸಿದರು.
ಜ್ಯೋತಿ ಆಗಮನ;
ಇದಕ್ಕೂ ಮುಂಚೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಜ್ಯೋತಿ ಬರಮಾಡಿಕೊಂಡು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಗೆ ಚಾಲನೆ ನೀಡಲಾಯಿತು.
ಈ ಸಂಧರ್ಬದಲ್ಲಿ ಬೈಲಹೊಂಗಲ ಉಪವಿಭಗಾಧಿಕಾರಿ ಶಶಿಧರ ಬಗಲಿ, ರವೀಂದ್ರ ಕರಲಿಂಗಣವರ, ಬೈಲಹೊಂಗಲ ತಹಶೀಲ್ದಾರ್ ಬಸವರಾಜ ನಾಗರಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಸಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಮಾಮ್ ಹುಸೇನ್ ಖುದ್ದುನವರ ಹಾಜರಿದ್ದರು.
https://pragati.taskdun.com/shrad-yadav-died/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ