Karnataka NewsNational

*ಸಾವನ್ನಪ್ಪಿದ್ದ ಅಭಿಮಾನಿಗಳಿಗೆ 10 ಲಕ್ಷ ಪರಿಹಾರ ಘೋಷಿಸಿದ RCB*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ತಂಡ ನಡೆಸಿದ ವಿಜೆಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದು, ಘಟನೆಯ ಬಗ್ಗೆ ಕೊನೆಗೂ ಆರ್‌ಸಿಬಿ ಖೇದ ವ್ಯಕ್ತಪಡಿಸಿದೆ. 

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಯಲ್ ಚಾಲೇಂಜರ್ ಬೆಂಗಳೂರು, ಘಟನೆಯಿಂದ ಮನಸ್ಸಿಗೆ ತೀವ್ರ ಘಾಸಿಯಾಗಿದೆ. ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ 10 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದಕ್ಕೆ ಸಂಪಾತ ಸೂಚಿಸಿರುವ ಆರ್‌ಸಿಬಿ, ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಿದೆ. 

Home add -Advt

Related Articles

Back to top button