*ತವರಿಗೆ ಮರಳಿದ ಆರ್ ಸಿ ಬಿ ಸ್ಟಾರ್ ಪ್ಲೇಯರ್ ಶ್ರೇಯಾಂಕಾ: ಅದ್ಧೂರಿ ವೆಲ್ ಕಮ್ ಮಾಡಿದ ಗ್ರಾಮಸ್ಥರು*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಪ್ರೇಮಿರ್ ಲೀಗ್ ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿಗೆ ಮುಖ್ಯ ಪಾತ್ರ ವಹಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಸ್ವಂತ ಊರು ಜೇವರ್ಗಿ ತಾಲೂಕಿನ ಕೋಳಕೂರು ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಹುಟ್ಟೂರಿಗೆ ಬಂದ ಶ್ರೇಯಾಂಕಾ ಪಾಟೀಲ್ಗೆ ಹೆಮ್ಮೆಯಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ.
ಭಾರತ ತಂಡದ ಕ್ರಿಕೆಟ್ ಆಟಗಾರ್ತಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಕನ್ನಡಿಗರ ಮನೆ ಮಾತಾಗಿದ್ದಾರೆ. ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಅತ್ಯಧಿಕ ವಿಕೆಟ್ ಪಡೆಯುವ ಮೂಲಕ ಆರ್ ಸಿ ಬಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಎಮರ್ಜಿಂಗ್ ಪ್ಲೇಯರ್ ಅವಾರ್ಡ್, ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡಾ ಶ್ರೇಯಾಂಕಾ ಪಾಲಾಗಿತ್ತು.
ಅಷ್ಟು ದಿನ ಬ್ಯೂಸಿ ಆಗಿದ್ದ ಶ್ರೇಯಾಂಕಾ ಪಾಟೀಲ್ ಅವರು ಸ್ವಂತ ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಹುಟ್ಟೂರಿಗೆ ಬಂದ ಶ್ರೇಯಾಂಕಾ ಪಾಟೀಲ್ಗೆ ಹೆಮ್ಮೆಯಿಂದ ಭರ್ಜರಿ ಬರಮಾಡಿಕೊಳ್ಳಲಾಗಿದೆ
ಶ್ರೇಯಾಂಕಾ ಅವರ ಮೇಲೆ ಹೂ ಮಳೆ ಗೈದ ಗ್ರಾಮಸ್ಥರು, ಶ್ರೀ ಸಿದ್ಧಬಸವೇಶ್ವರ ದೇವಸ್ಥಾನದವರೆಗೂ ಅದ್ಧೂರಿಯಾಗಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಳಿಕ ಸಿದ್ದಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೇಯಾಂಕಾ ಪಾಟೀಲ್ಗೆ ಹಾಗೂ ಕುಟುಂಬಸ್ಥರಿಗೆ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭಾಗಿಯಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ