CrimeKannada NewsKarnataka News

*ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ  ಮುತ್ಯಾ ವಿರುದ್ಧ ಪೋಕ್ಸೋ ಕೇಸ್*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಶಹಾಪುರದ ಮಹಲ್ ರೋಜಾದ ಮಲ್ಲಿಕಾರ್ಜುನ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುತ್ಯಾ ಎಂದೇ ಫೇಮಸ್‌ ಆಗಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿಯಾಗಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಮುತ್ಯಾ ಯಾವುದೇ ಕ್ಷಣದಲ್ಲೂ ಅರೆಸ್ಟ್‌ ಆಗುವ ಸಾಧ್ಯತೆಗಳಿವೆ. 

Home add -Advt

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. 

ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು. 

Related Articles

Back to top button