Kannada NewsKarnataka News

15 ಕ್ಷೇತ್ರಗಳ ಉಪಚುನಾವಣೆಗೆ ಪುನಃ ಅಧಿಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 21ರಂದು ನಿಗದಿಯಾಗಿದ್ದ ಚುನಾವಣೆಯನ್ನು ಸರ್ವೋಚ್ಛ ನ್ಯಾಯಾಲಯ ತಡೆಹಿಡಿದಿತ್ತು. ದಿನಾಂಕವನ್ನು ಮರುನಿಗದಿ ಮಾಡುವಂತೆ ಚುನಾವಣೆ ಆಯೋಗಕ್ಕೆ ಸೂಚಿಸಿತ್ತು.

ಅನರ್ಹ ಶಾಸಕರ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಚುನಾವಣೆಯನ್ನು ಮುಂದೂಡಲಾಗಿತ್ತು. ಅಕ್ಟೋಬರ್ 22ರಂದು ಸರ್ವೋಚ್ಛ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

ಇದೀಗ ನವೆಂಬರ್ 11ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟಿಸಲು ಚುನಾವಣೆ ಆಯೋಗ ನಿರ್ಧರಿಸಿದೆ. ನ.18 ನಾಮಪತ್ರ ಸಲ್ಲಿಸಲು ಕೊನೆಯ ದಿನ. ನ19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.21 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನ. ಮತದಾನ ಡಿಸೆಂಬರ್ 5ರಂದು ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ ಹಾಗೂ ಗೋಕಾಕ ಕ್ಷೇತ್ರಗಳು ಸೇರಿದಂತೆ ರಾಜ್ಯದ ಟ್ಟೂ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ನ 14 ಹಾಗೂ ಜೆಡಿಎಸ್ ನ 3 ಶಾಸಕರು ರಾಜಿನಾಮೆ ನೀಡಿದ್ದರು. ಅವರ ರಾಜಿನಾಮೆ ಅಂಗೀಕರಿಸದೆ, ಅಂದಿನ ಸ್ಪೀಕರ್ ರಮೇಶ ಕುಮಾರ ಅವರೆಲ್ಲರನ್ನೂ ಶಾಸಕತ್ವದಿಂದ ಅನರ್ಹಗೊಳಿಸಿದ್ದರು.

Home add -Advt

ಈ ಪೈಕಿ ರಾಜರಾಜಶ್ವರಿ ನಗರ ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣೆ ಫಲಿತಾಂಶ ವಿವಾದ ನ್ಯಾಯಾಲಯದಲ್ಲಿರುವುದರಿಂದ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಅನರ್ಹರಿಗೆ ಶಾಕ್ -ಹಠಾತ್ ಉಪಚುನಾವಣೆ ಘೋಷಣೆ

ಚುನಾವಣೆಯೇ ರದ್ದಾಗುತ್ತಾ? -ಸುಪ್ರಿಂ ತೀರ್ಪು ಏಕೆ ಮಹತ್ವ ಗೊತ್ತಾ?

Related Articles

Back to top button