Kannada NewsLatestWorld
*ಶಾಲೆಯ ಮೇಲೆ ಗುಂಡಿನ ದಾಳಿ: ದಾಳಿಕೋರ ಸೇರಿ 10 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಶಾಲೆಯ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ದಾಳಿಕೋರ ಸೇರಿ 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಏರ್ ಲಿಫ್ಟ್ ಮಾಡಲಾಗಿದೆ. ಮೊನ್ನೆಯಷ್ಟೇ ಕೆನಡಾದಲ್ಲಿ ನಡೆದ ಗುಂಡಿನ ದಾಳಿಗೆ ಕನ್ನಡಿಗರೊಬ್ಬರು ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಕೆನಾಡದಲ್ಲಿ ಶಾಲೆಯ ಮೇಲೆ ಗುಂಡಿನ ದಾಳಿ ನಡೆದಿದೆ.


