ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಲು ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಶೀಘ್ರವೇ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.