Kannada NewsKarnataka NewsLatest

*PSI ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿಯಿದ್ದು ಶೀಘ್ರದಲ್ಲೇ ನೇಮಕಾತಿ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ 8 ಸಾವಿರ ಕಾನ್‌ಸ್ಟೇಬಲ್ ಹುದ್ದೆಗಳು ಖಾಲಿಯಿದ್ದು ಈಗಾಗಲೇ 500 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನುಳಿದ ಬಾಕಿಯಿರುವ ಹುದ್ದೆಗಳಿಗೆ ಆದ್ಯತೆಯ ಮೇರೆಗೆ ಆದಷ್ಟು ಬೇಗ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಸೇರಿದಂತೆ ಇತರೆ ವಿಚಾರಗಳ ಕುರಿತು ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button