*ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ರೆಗ್ಯೂಲರ್ ಆಧಾರದ ಮೇಲೆ ಸಬ್-ಸ್ಟಾಪ್ ಕೇಡರನಲ್ಲಿ ಆಫೀಸ್ ಅಸಿಸ್ಟೆಂಟ್ (ಪ್ಯೂನ್) 500 ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ದಿನಾಂಕ: 23-05-2025 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ www.bankofbaroda.in ವೆಬ್ ಸೈಟ್ ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.