Belagavi NewsBelgaum NewsKannada NewsKarnataka NewsLatest

*ಪೊಲೀಸ್ ಹುದ್ದೆಗಳ ನೇಮಕಾತಿ; ಅಕ್ರಮ ತಡೆಗೆ ಪೂರ್ವ ಸಿದ್ಧತೆ ಅತ್ಯಗತ್ಯ: ಡಿಸಿ ಮೊಹಮ್ಮದ್ ರೋಷನ್*

ಅಕ್ರಮ ತಡೆಗೆ ಪೂರ್ವ ಸಿದ್ಧತೆ ಅತ್ಯಗತ್ಯ: ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಪೊಲೀಸ್ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಯ ಪರೀಕ್ಷೆಗಳು ಆಗಸ್ಟ್ 2 ರಂದು ನಡೆಯಲಿದ್ದು, ನಿಯೋಜಿತ ಸಿಬ್ಬಂದಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೇಳಿದರು.

Home add -Advt

ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬುಧವಾರ (ಜು.29) ನಡೆದ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ ಮಾತನಾಡಿ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಕ್ಯಾಮರಾ ಇರುವುದು ಅಗತ್ಯವಾಗಿದೆ. ಅಕ್ರಮ ನಡೆಯುವಂತಹ ವಸ್ತುಸ್ಥಿತಿಯನ್ನು ಕಂಡು ಇಡಿಯುವಂತಹ ಎ.ಐ ಕ್ಯಾಮರಾ ಅಳವಡಿಸಬೇಕು. 

ದೂರದಿಂದ ಬರುವಂತಹ ಅಭ್ಯರ್ಥಿಗಳಿಗೆ ಸುಗಮ ಸಂಚಾರ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಸೌಲಭ್ಯ ಹೆಚ್ಚಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ನಗರ ಆಯುಕ್ತ ಬೊರಸೆ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ ಈ ಹಿಂದೆ ಯಾವುದೇ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ನಿಯೋಜಿತ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ಮತ್ತೆ ನಿಯೋಜಿಸಬಾರದು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ ಕಾಂಬಳೆ ಅವರು ಪ್ರಸ್ತಾವಿಕ ಮಾತನಾಡಿ ಆಗಸ್ಟಾ 2, 2026 ರಂದು ರವಿವಾರ ನಡೆಯುವ ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆಯಾಗಿರುವುದರಿಂದ ಇದನ್ನು ಬಹಳಷ್ಟು ಅಚ್ಚುಕಟ್ಟಾಗಿ ಕಾನೂನು ಬದ್ಧವಾಗಿ ನಡೆಸಬೇಕು ಎಂದು ಹೇಳಿದರು.

ಬೆಳಗಾವಿಯಲ್ಲಿ 46 ಕೇಂದ್ರಗಳು ಹಾಗೂ ಚಿಕ್ಕೋಡಿಯಲ್ಲಿ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 25164 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿತ ಮುಖ್ಯ ಅಧೀಕ್ಷಕರು 2 ಗಂಟೆ ಮುಂಚಿತವಾಗಿಯೇ ಹಾಜರಿರಬೇಕು.

ನಿಯೋಜಿತ ಸಿಬ್ಬಂದಿಗಳಿಗೆ ಪರೀಕ್ಷೆ ಕೇಂದ್ರಗಳಲ್ಲಿ ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. ಬೆಳಿಗ್ಗೆ 7.30 ಗಂಟೆಗೆ ಪ್ರಶ್ನೆ ಪತ್ರಿಕೆಗಳನ್ನು ಕಳಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿನ ಅಧಿಕಾರಿಗಳು ಅವುಗಳನ್ನು ಸರಿಯಾಗಿ ಪರಿಶೀಲಿಸಿ ಪಡೆದುಕೊಳ್ಳಬೇಕು. ಪರೀಕ್ಷೆ ಪ್ರಕ್ರಿಯೆ ಸಂಪೂರ್ಣವಾಗಿ ಕ್ಯಾಮರಾಗಳ ಕಣ್ಗಾವಿಲನಲ್ಲಿ ನಡೆಯುವುದು ಕಡ್ಡಾಯ ಎಂದು ಹೇಳಿದರು. 

ಪರೀಕ್ಷಾ ಕೇಂದ್ರದಲ್ಲಿನ 24 ಜನ ಅಭ್ಯರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರ ನಿಯೋಜಿಸಲಾಗುವುದು. ಪ್ರಶ್ನೆ ಪತ್ರಿಕೆ ಮತ್ತು ಓ.ಎಂ.ಆರ್ ಸೀಟ್ ನಂಬರ್ ಒಂದೇ ಇರುವುದಾಗಿ ಪರೀಕ್ಷಿಸಿ ವಿತರಿಸಬೇಕು ಎಂ.ಎಂ ಕಾಂಬಳೆ ಹೇಳಿದರು.

ಸಭೆಯಲ್ಲಿ ಚಿಕ್ಕೋಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಲಿಂಗರಾಜ ಹಾಗೂ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ವಿವಿಧ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಉಪಸ್ತಿತರಿದ್ದರು.

Related Articles

Back to top button