Latest

*JDS ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ; ದಳಪತಿಗಳಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆ ಗುಬ್ಬಿ ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ವೇಳೆ ದಳಪತಿಗಳಿಗೆ ಮತ್ತೊಂದು ಆಘಾತ ನೀಡಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸೇರಿ 300ಕ್ಕೂ ಹೆಚ್ಚು ಜೆಡಿಎಸ್ ಸದಸ್ಯರು ರಾಜೀನಾಮೆ ನೀಡಿದ್ದು,
ಜೆಡಿಎಸ್ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ.

Home add -Advt

ಇನ್ನು ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ನಾಳೆ ಜೆಡಿಎಸ್ ಗೆ ರಾಜಿನಾಮೆ ಕೊಡುವುದಾಗಿ ತಿಳಿಸಿದ್ದಾರೆ. ಇದೇ ರಾಜೀನಾಮೆ ನೀಡಬೇಕಿತ್ತು. ಆದರೆ ಸ್ಪೀಕರ್ ಇರಲಿಲ್ಲ ಹಾಗಾಗಿ ನಾಳೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ.

Related Articles

Back to top button