*ಭಾರಿ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಶಾಲಾ ಕಾಲೇಜುಗಳಿಗೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆ ಸೇರಿದಂತೆ ಇಡೀ ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ನೆಚ್ಚರಿಕೆ ನೀಡಿದೆ. ಜುಲೈ 2 ಮತ್ತು ಜುಲೈ 3 ರಂದು ಉಡುಪಿಯಲ್ಲಿ ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಳ್ಳಲಿದ್ದು, ಕಡಲ ತೀರದ ನಿವಾಸಿಗಳು ಮತ್ತು ಸಾರ್ವಜನಿಕರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.


