ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳ್ಳರಿಂದ ವಶಪಡಿಸಿಕೊಂಡಿದ್ದ ರಕ್ತಚಂದನ ತುಂಡುಗಳನ್ನು ಸ್ಮಗ್ಲಿಂಗ್ ಮಾಡಿ ಪೊಲೀಸರೇ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಡಿಸೆಂಬರ್ 15ರಂದು ಆಂಧ್ರಪ್ರದೇಶದಿಂದ ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಮೋಹನ್ ಹಾಗೂ ಮಹದೇವಪುರ ಠಾಣೆಯ ಹೆಚ್ ಸಿ ಮಮ್ತೇಶ್ ಗೌಡ, ಆರೋಪಿಗಳಿಂದ 13 ಲಕ್ಷದ ಮೌಲ್ಯದ ರಕ್ತ ಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸದೇ ಅವರನ್ನು ಬಿಟ್ಟು ಕಳುಹಿಸಿದ್ದರು.
ಹೀಗೆ ವಶಕ್ಕೆ ಪಡೆದಿದ್ದ 21 ರಕ್ತಚಂದನ ತುಂಡುಗಳನ್ನು ಪೊಲೀಸರೇ ಮಾರಾಟ ಮಾಡಿದ್ದರು. ಇಡೀ ಪ್ರಕರಣದ ಬಗ್ಗೆ ಹೊಸಕೋಟೆ ಠಾಣೆ ಪೊಲೀಸರು ಅನುಮಾನಗೊಂಡು ತನಿಖೆ ನಡೆಸಿದಾಗ ಪ್ರಕರಣ ಬಯಲಾಗಿತ್ತು. ಇದೀಗ ಹೆಡ್ ಕಾನ್ಸ್ ಟೇಬಲ್ ಗಳಾದ ಮೋಹನ್ ಹಾಗೂ ಮಮ್ತೇಶ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ